ಬಂಟ್ವಾಳ: ಕಾರು ನಡುವೆ ಅಪಘಾತ – ಹಲವರು ಗಂಭೀರ

ಸಮಗ್ರ ನ್ಯೂಸ್:ಕಾರು ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜು.9ರ ಬಿ.ಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ.

. Ad Widget . Ad Widget

ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.
ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಒಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *