Ad Widget .

ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 22ನೇ ನೂತನ ಶಾಖೆ ಉದ್ಘಾಟನೆ| ಸಂಘವು ಸಹಕಾರಿ‌ ಕ್ಷೇತ್ರದ ಪ್ರಬಲ ಶಕ್ತಿ – ಶಾಸಕ ಹರೀಶ್ ಪೂಂಜಾ ಅಭಿಮತ

ಸಮಗ್ರ ನ್ಯೂಸ್: ಸಹಕಾರಿ ಸಂಘಗಳು ಆರ್ಥಿಕವಾಗಿ ಪ್ರಬಲವಾಗಲು ಬೆಳ್ತಂಗಡಿ ತಾಲೂಕು ಸಮರ್ಥವಾಗಿದೆ. ಇದೇ ಕಾರಣದಿಂದ ವೆಂಕಟರಮಣ ಸೊಸೈಟಿ ತಾಲೂಕಿನಲ್ಲಿ ಐದು ಶಾಖೆಗಳನ್ನು ಪ್ರಾರಂಭಿಸಿದೆ. ದ.ಕ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಬೆಳವಣಿಗೆ ಕಾಣುತ್ತಿದೆ. ಸಹಕಾರಿ ಕ್ಷೇತ್ರ ಜನರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ವೆಂಕಟರಮಣ ಸೊಸೈಟಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಆರ್ಥಿಕವಾಗಿ ಪ್ರಬಲ ಶಕ್ತಿಯಾಗಿ ಬೆಳೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಭಿಪ್ರಾಯಪಟ್ಟರು. ಅವರು ಇಂದು(ಜು. 9) ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ 22ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

Ad Widget . Ad Widget .

ವಿಧಾನಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಶಾಖೆಯ ಕಚೇರಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹಣಕಾಸು ಸಂಸ್ಥೆ ಜಾಸ್ತಿಯಾದಂತೆ, ವ್ಯವಹಾರವು ಜಾಸ್ತಿಯಾಗುತ್ತದೆ. ಇದರಿಂದ ಕೃಷಿಕರಿಗೆ, ಉದ್ದಿಮೆಗಳನ್ನು ನಡೆಸಲು ಸುಲಭದಲ್ಲಿ ಸಾಲ ಸೌಲಭ್ಯ ಸಿಗುತ್ತಿದೆ. ಸಂಸ್ಥೆಯು ಉತ್ತಮ ರೀತಿಯಲ್ಲಿ ಮುನ್ನಡೆಯಲಿ ಎಂದರು.

Ad Widget . Ad Widget .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷ ಪಿ.ಸಿ ಜಯರಾಮ್ ವಹಿಸಿದ್ದರು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾಪೋಷಕರಾದ ಶ್ರೀಮತಿ ಲೋಕೇಶ್ವರಿ ವಿನಯಚ್ಚಂದ್ರ, ಮರೈನ್ ನಿವೃತ ಮುಖ್ಯ ಅಭಿಯಂತರರಾದ ಡಿ‌.ಯಂ.ಗೌಡ, ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರಂಜಿನಿ ಆರ್, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪಿ ತಿಮ್ಮಪ್ಪ ಗೌಡ ಬೆಳಾಲು, ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಚಂದ್ರಕಾಂತ್, ಡಿ.ಸೋಜಾ ಕಾಂಪ್ಲೇಕ್ಸ್ ಮಾಲಕ ಹೆನ್ರಿ ಡಿಸೋಜಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ನಿರ್ದೇಶಕರಾದ ಜಾಕೆ ಸದಾನಂದ,ನಿತ್ಯಾನಂದ ಮುಂಡೋಡಿ,ಎ.ವಿ ತೀರ್ಥ ರಾಮ,ಚಂದ್ರಾ ಕೋಲ್ಚಾರ್,ಕೆ.ಸಿ ನಾರಾಯಣ ಗೌಡ,ಕೆ.ಸಿ ಸದಾನಂದ, ಪಿ‌.ಎಸ್ ಗಂಗಾಧರ,ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್, ಜಯಲಲಿತ ಕೆ.ಎಸ್,ನಳಿನಿ ಸೂರಯ್ಯ,ಲತಾ ಎಸ್ ಮಾವಜಿ, ಹೇಮಚಂದ್ರ ಐ‌.ಕೆ,ಶೈಲೇಶ್ ಅಂಬೆಕಲ್ಲು, ನವೀನ್ ಕುಮಾರ್ ಜೆ.ವಿ ಹಾಗೂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಟಿ ವಿಶ್ವನಾಥ, ಬ್ರಾಂಚ್ ಮ್ಯಾನೇಜರ್ ಯೋಗೀಶ್ ಹಾಗೂ ಸಿಬ್ಬಂದಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ಸ್ವಾಗತಿಸಿ, ದಿನೇಶ್ ಮಡಪ್ಪಾಡಿ ಪ್ರಸ್ತಾವಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥ ವಂದಿಸಿ, ನಿರ್ದೇಶಕ ಪಿ.ಎಸ್ ಗಂಗಾಧರ ನಿರೂಪಿಸಿದರು.

Leave a Comment

Your email address will not be published. Required fields are marked *