Ad Widget .

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಕಾರೊಂದು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

Ad Widget . Ad Widget .

ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *