Ad Widget .

ಇಂದಿನಿಂದ ಹಂಪಿಯಲ್ಲಿ ಜಿ-20 ಶೃಂಗಸಭೆ|ನವವಧುವಿನಂತೆ ಶೃಂಗಾರಗೊಂಡಿದೆ ವಿಶ್ವಪಾರಂಪರಿಕ ತಾಣ

ಸಮಗ್ರ ನ್ಯೂಸ್: ವಿಶ್ವ ವಿಖ್ಯಾತ ಹಂಪಿಯಲ್ಲಿ ಇದೇ ಮೊದಲ ಬಾರಿಗೆ ಜಿ-20 ಶೃಂಗಸಭೆ ನಡೆಯುತ್ತಿದೆ. ಜುಲೈ 9ರಿಂದ 16 ರವರೆಗೆ ನಡೆಯಲಿರುವ ಜಿ-20 ಶೃಂಗಸಭೆಗೆ ಹಂಪಿ ನವವಧುವಿನಂತೆ ಶೃಂಗಾರಗೊಂಡಿದೆ. ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿ-20 ಸಲುವಾಗಿ ಹಂಪಿಯಲ್ಲಿ ಕೈಗೊಳ್ಳಲಾಗಿದೆ.

Ad Widget . Ad Widget .

ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತಿ ಮುಖ್ಯವಾದ ಜಿ-20 ಶೃಂಗಸಭೆಯ 3ನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ ನಡೆಯಲಿದೆ. 3 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 3 ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ಹಂಪಿಯಲ್ಲಿ ನಡೆಯಲಿದೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಹಂಪಿ ಪ್ರದೇಶದ ಸುತ್ತಮುತ್ತಲಿನ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದೆ. ಸ್ಮಾರಕಗಳ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. 43 ರಾಷ್ಟ್ರಗಳ 20 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿರುವುದರಿಂದ ಹಂಪಿಯ ಸುತ್ತಮುತ್ತ ಎಲ್ಲೆಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.

Ad Widget . Ad Widget .

ಶೃಂಗಸಭೆಗೆ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು ಸೇರಿದಂತೆ ಒಟ್ಟು 52 ಗಣ್ಯರು ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

Leave a Comment

Your email address will not be published. Required fields are marked *