ಸಮಗ್ರ ನ್ಯೂಸ್: ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು ಜುಲೈ ಬಂಧಿಸಿದ್ದರು. ಶುಕ್ರವಾರ ಸ್ಥಳೀಯ ನ್ಯಾಯಾಲಯ (Local Court) ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.
ಜೈಲಿನಿಂದ ಬಿಡುಗಡೆಗೊಂಡ ನಂತರ ಹೊಸದಾಗಿ ದಾಂಪತ್ಯ ಜೀವನ ಶುರು ಮಾಡಲು ಈ ಜೋಡಿ ಮುಂದಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಸಂತಸ ಹಂಚಿಕೊಂಡ ಸೀಮಾ, ನನ್ನ ಪತಿ ಹಿಂದೂ, ಹಾಗಾಗಿ ನಾನೂ ಹಿಂದೂ. ನಾನೀಗ ಭಾರತೀಯಳು ಎಂದು ಭಾವಿಸುತ್ತೇನೆ ಎಂದು ಹೇಳಿಕೊಂಡಿದ್ದಾಳೆ.
ಸೀಮಾ ಬಂದಿದ್ದು ಹೇಗೆ?
ನನ್ನದು ತುಂಬಾ ದೀರ್ಘ ಪ್ರಯಾಣವಾಗಿತ್ತು. ಮೊದಲ ಮದುವೆಯಾದ ನಂತರ ಕರಾಚಿಯಿಂದ ದುಬೈಗೆ ಹೋಗಿದ್ದೆ. ಅಲ್ಲಿಂದ ನೇಪಾಳಕ್ಕೆ ಹೋದ್ವಿ. ಕೊನೆಗೆ ಪೋಖ್ರಾ ದಾರಿ ಹಿಡಿಯುವ ಮುನ್ನ ಸಚಿನ್‌ನನ್ನ ಭೇಟಿಯಾಗಿದ್ದೆ. ನಂತರ ನಾನು ಪಾಕಿಸ್ತಾನಕ್ಕೆ, ಸಚಿನ್ ಭಾರತಕ್ಕೆ ಮರಳಿದ್ದರು. ಅದಾದ ಮೇಲೆ ಸೀಮಾ ಹಾಗೂ ಪತಿ ನಡುವೆ ಭಿನ್ನಾಭಿಪ್ರಾಯ ಶುರುವಾಗಿ ಪಾಕಿಸ್ತಾನ ತೊರೆಯಲು ಮುಂದಾದಳು. ಸೀಮಾ ತನಗಿದ್ದ ಒಂದು ಫ್ಲಾಟ್ ಅನ್ನು 12 ಲಕ್ಷ ರೂ.ಗೆ (ಪಾಕಿಸ್ತಾನ ರೂಪಾಯಿಗಳಲ್ಲಿ) ಮಾರಾಟ ಮಾಡಿ, ತನಗೆ ಮತ್ತು ತನ್ನ ನಾಲ್ಕು ಮಕ್ಕಳಿಗೆ ನೇಪಾಳಕ್ಕೆ ವಿಮಾನ ಟಿಕೆಟ್ ಮತ್ತು ವೀಸಾ ವ್ಯವಸ್ಥೆ ಮಾಡಿಕೊಂಡಳು. ಕಳೆದ ಮೇ ತಿಂಗಳಲ್ಲಿ ದುಬೈ ಮೂಲಕ ನೇಪಾಳಕ್ಕೆ ಬಂದ ಸೀಮಾ, ಅಲ್ಲಿಂದ ಮೇ 13ರಂದು ಗ್ರೇಟರ್ ನೋಯ್ದಾಗೆ ಬಂದಿಳಿದಿದ್ದಳು. ಸಚಿನ್ ತನ್ನ ಪ್ರಿಯತಮೆಯ ಗುಟ್ಟು ಬಿಟ್ಟುಕೊಡದೇ ನೋಯ್ಡಾದಲ್ಲೇ ಬಾಡಿಗೆ ಮನೆ ಮಾಡಿ ಇರಿಸಿದ್ದ. ಈ ವಿಷಯ ಬೆಳಕಿಗೆ ಬಂದ ನಂತರ ಜುಲೈ 4ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು.
ಏನಿದು ಸ್ಟೋರಿ..?
ಸೀಮಾ ಹಾಗೂ ಸಚಿನ್ ಲವ್‌ಸ್ಟೋರಿ ಬಾಲಿವುಡ್ ಸಿನಿಮಾದಷ್ಟೇ ಕುತೂಹಲವಾಗಿದೆ. ಸಚಿನ್ ಮೀನಾ ಮೂಲತಃ ಉತ್ತರಪ್ರದೇಶದವನಾಗಿದ್ದು, ದೇಶದಲ್ಲಿ ಕೋವಿಡ್ ವ್ಯಾಪಿಸಿದ ಸಂದರ್ಭದಲ್ಲಿ ಆನ್‌ಲೈನ್ ಗೇಮ್ ಪಬ್‌ಜೀ ಆಡುತ್ತಿದ್ದ. ಈ ವೇಳೆ ಇವರಿಬ್ಬರ ಪರಿಚಯವಾಗಿ, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು.