Ad Widget .

ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ: ಸಿದ್ದರಾಮ ಸ್ವಾಮೀಜಿ

ಸಮಗ್ರ ನ್ಯೂಸ್: ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

Ad Widget . Ad Widget .

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

Ad Widget . Ad Widget .

ಲಿಂಗಾಯತ (Lingayat) ಧರ್ಮಕ್ಕೆ ವಚನ ಸಾಹಿತ್ಯವೇ ಸಂವಿಧಾನವಾಗಿದೆ. ನಾವೆಲ್ಲ ಇಷ್ಟಲಿಂಗವನ್ನು ಅರ್ಚಿಸುವಂತವರಾಗಿದ್ದೇವೆ. ಹಿಂದೂ ಧರ್ಮದಲ್ಲಿ ಓರ್ವ ಪ್ರವರ್ತಕ, ಪ್ರವಾದಿ, ಯಾವುದೇ ನಿರ್ದಿಷ್ಟವಾದ ಗ್ರಂಥ ಇಲ್ಲ. ನಿರ್ದಿಷ್ಟವಾದ ದೇವರಿಲ್ಲ. ಅಲ್ಲಿ 33 ಕೋಟಿ ದೇವರನ್ನು ಪೂಜಿಸುತ್ತಾರೆ. ಅದು ವೈದಿಕ ಧರ್ಮವಾಗಿದೆ. ಅದನ್ನೇ ಹಿಂದೂ ಧರ್ಮ ಎಂದು ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಭಗವದ್ಗೀತೆಯಲ್ಲಿ 18 ಅಧ್ಯಾಯಗಳಿವೆ. ಅದರಲ್ಲಿ ಯಾವ ಶ್ಲೋಕದಲ್ಲಿಯೂ ಹಿಂದೂ ಎಂಬ ಪದ ಇಲ್ಲ. ವೇದ, ಉಪನಿಷತ್‍ಗಳಲ್ಲಿ ಆ ಪದದ ಪ್ರಯೋಗ ಆಗಿಲ್ಲ. ಹೀಗಾಗಿ ನಾವು ಸ್ವತಂತ್ರ ಧರ್ಮ ಪಡೆದಲ್ಲಿ ಹಿಂದೂ ವಿರೋಧಿ ಆಗುವುದಿಲ್ಲ ಎಂದಿದ್ದಾರೆ.

Leave a Comment

Your email address will not be published. Required fields are marked *