ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ|9 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ NIA

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತುಂಗಾ ತೀರದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 9 ಜನರ ವಿರುದ್ಧ ಶುಕ್ರವಾರ ಸಲ್ಲಿಸಿದ ಎರಡು ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ.

. Ad Widget . Ad Widget . Ad Widget .

ರೋಬೋಟ್‌ಗಳ ಮೂಲಕ ವಿಧ್ವಂಸಕ ಕೃತ್ಯಕ್ಕೆ ಐಸಿಸ್(ISIS) ಸಂಚು ರೂಪಿಸಿತ್ತು ಎಂದು ತಿಳಿದುಬಂದಿದೆ. ಇದಕ್ಕಾಗಿ ಅವರು ಕೋರ್ಸ್‌ಗಳನ್ನು ಕಲಿಯಲು ಮುಂದಾಗಿದ್ದರು ಎಂದು ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ. ಆರೋಪಿಗಳನ್ನು ಮೊಹಮ್ಮದ್ ಶಾರಿಖ್, ಮಾಜ್ ಮುನೀರ್ ಅಹಮದ್ , ಸೈಯದ್ ಯಾಸಿನ್ , ರೀಶಾನ್ ತಾಜುದ್ದೀನ್ ಶೇಖ್ , ಹುಜೈರ್ ಫರ್ಹಾನ್ ಬೇಗ್, ಮಜಿನ್ ಅಬ್ದುಲ್ ರಹಮಾನ್, ನದೀಮ್ ಅಹಮದ್ ಕೆಎ, ಜಬೀವುಲ್ಲಾ ಮತ್ತು ನದೀಮ್ ಫೈಝಲ್ ಎನ್ ಎಂದು ಗುರುತಿಸಲಾಗಿದೆ. ಇವರೆಲ್ಲಾ ಮೆಕಾನಿಕಲ್ ಇಂಜಿನಿಯರಿಂಗ್‌ ಕೋರ್ಸ್ ಮಾಡಿದ್ದು, ವಾಟ್ಸ್‌ಪ್‌ ಗ್ರೂಪ್‌ಗಳ ಮೂಲಕ ತರಬೇತಿ ನೀಡುತ್ತಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *