ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬಾಳಿಲ ಒಕ್ಕೂಟದಲ್ಲಿ ಮಾಡಲಾಯಿತು.
ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ತ್ರಿವೇಣಿ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ವಲಯದ ವಲಯ ಅಧ್ಯಕ್ಷರು ಶ್ರೀಮತಿ ವೇದ ಶೆಟ್ಟಿ.ಹೆಚ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿ ಸಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಯುತ ರಾಜೇಶ್ ಅಯ್ಯನಕಟ್ಟೆ ರವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತ ನಾವು ಯಾವ ಯಾವ ರೀತಿಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ತೊಂದರೆಗೆ ಒಳಗಾಗುತ್ತದೆ ಹಾಗೂ ಅದರಿಂದ ಹೇಗೆ ನಮ್ಮನ್ನು ಹಾಗೂ ಇತರರನ್ನು ಹೇಗೆ ಕಾಪಾಡಬೇಕೆಂದು ಬಹಳ ಉತ್ತಮ ರೀತಿಯಲ್ಲಿ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು ಶ್ರೀಯುತ ಗೋಪಾಲಕೃಷ್ಣ, ಸೇವಾಪ್ರತಿನಿಧಿ ಸೌಮ್ಯ.ಕೆ, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.