ಉಡುಪಿ: ಓವರ್ ಪಾಸ್ ಕಾಮಗಾರಿ ಪಕ್ಕ ಸರ್ವೀಸ್ ರಸ್ತೆ ಕುಸಿತ

ಸಮಗ್ರ ನ್ಯೂಸ್: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡದ ಒಂದು ಭಾಗ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ‌ ಸೃಷ್ಟಿಯಾಗಿದೆ.

Ad Widget ... ..

ರಸ್ತೆ ನಿರ್ಮಾಣಕ್ಕಾಗಿ ಹೊಂಡ ತೋಡಲಾಗಿದ್ದು, ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು. ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

Ad Widget

Leave a Comment

Your email address will not be published. Required fields are marked *