ಸಮಗ್ರ ನ್ಯೂಸ್: ಭಾರತಕ್ಕೆ ಮಳೆಗಾಲ ಆರಂಭ ಕೊಂಚ ತಡವಾದರೂ ಯಾರೂ ಊಹಿಸದ ರೀತಿಯಲ್ಲಿ ಅಬ್ಬರಿಸುತ್ತಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತಕ್ಕೆ ಅನಾಹುತವೇ ಸೃಷ್ಟಿಯಾಗಿದೆ. ಮುಖ್ಯವಾಗಿ ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳು ಮುಳುಗಡೆಯಾಗಿದೆ.
ಹಿಮಾಚಲ ಪ್ರದೇಶದ ಬಹುತೇಕ ಜಿಲ್ಲೆಯಲ್ಲಿ ಭೂಕುಸಿತ, ಪ್ರವಾಹದಿಂದ ಪಟ್ಟಣ, ಗ್ರಾಮಗಳೇ ಸರ್ವನಾಶವಾಗಿದೆ. ಭೀಕರ ಮಳೆಗೆ ಇದೀಗ ಐದು ರಾಜ್ಯಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಿಮಾಚಲ ಪ್ರದೇಶ, ದೆಹಲಿ, ಹರ್ಯಾಣ, ಪಂಜಾಬ್ ಹಾಗೂ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದೆಹಲಿ: ದೆಹಲಿ, ಹರ್ಯಾಣ ಹಾಗೂ ಪಂಜಾಬ್ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ದೆಹಲಿಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ. ಹಲವು ಕಟ್ಟಡಗಳ ಗೋಡಗಳು ಕುಸಿದಿದೆ. ಸತತ ಮಳೆ ಹಾಗೂ ಪ್ರವಾಹದಿಂದ ನಾಳೆಯೂ ದೆಹಲಿ ಹಾಗೂ ರಾಜಧಾನಿ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿಯಲ್ಲಿ 1 ರಿಂದ 12ನೇ ತರಗತಿ ವರೆಗಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.