ಸಮಗ್ರ ನ್ಯೂಸ್: ನೀವು ನಿಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳುವ ಯೋಜನೆಯಲ್ಲಿದ್ದರೆ ಅದಕ್ಕಾಗಿ ಪ್ರತ್ಯೇಕ ಸಾಮಾಜಿಕ ಜಾಲತಾಣದ ಲಿಂಕ್ ಅನ್ನು ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.
https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.
ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.
ಒಟ್ಟಾರೆಯಾಗಿ ರಾಜ್ಯದ ಜನರು ತಮ್ಮ ಸಮಸ್ಯೆ ಹೇಳಿಕೊಂಡಾಗ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ನೀವು ಮೇಲ್ಕಂಡ ಲಿಂಕ್ ಗೆ ಕ್ಲಿಕ್ ಮಾಡಿ, ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡರೇ, ಕೆಲವೇ ಕ್ಷಣಗಳಲ್ಲಿ ಪರಿಹಾರ ದೊರೆಯಲಿದೆ.