Ad Widget .

ಪತ್ನಿ, ಕುಟುಂಬಸ್ಥರಿಂದ ಕಿರುಕುಳ: ‘ಲೈವ್ ವಿಡಿಯೋ’ ಮಾಡಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್:‌ ಪತ್ನಿ ಹಾಗೂ ಆಕೆಯ ಮನೆಯವರ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಮಾರಗೌಡನಹಳ್ಳಿಯಲ್ಲಿ ನಡೆದಿದೆ.

Ad Widget . Ad Widget .

ವಿನಯ್ (40) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಪತ್ನಿ ಆಶಾ ಹಾಗೂ ಅವರ ಪೋಷಕರು ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
ವಿಷ ಸೇವಿಸುವ ಮುನ್ನ ವಿಡಿಯೋ ಮಾಡಿಟ್ಟಿರುವ ವಿನಯ್, ನನ್ನ ಸಾವಿಗೆ ನನ್ನ ಪತ್ನಿ ಆಶಾ, ಅತ್ತೆ ರತ್ನಮ್ಮ, ನಾದಿನಿ ಉಷಾ ಕಾರಣ. ಆಶಾ ಕುಟುಂಬಸ್ಥರಿಂದ ನನಗೆ ಮಾನಸಿಕ ಚಿತ್ರಹಿಂಸೆಯಾಗಿದೆ. ಈವರೆಗೆ ಎಲ್ಲವನ್ನೂ ಸಹಿಸಿಕೊಂಡಿದ್ದೆ. ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *