ಕೊಡಗು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಮನೆ ಮತ್ತು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ. ಕಾರು ಚಾಲಕ ಕೊಡ್ಲಿಪೇಟೆಯ ರಕ್ಷಿತ್‌ ಎಂದು ಗುರುತಿಸಲಾಗಿದೆ.

Ad Widget ... ..

ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದೆ. ಶನಿವಾರಸಂತೆಯಿಂದ ಕೊಡ್ಲಿಪೇಟೆಗೆ ಹೋಗುತ್ತಿದ್ದ ಕಾರು ಮಸೀದಿ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *