Ad Widget .

ಬಣಕಲ್: ಕೃಷಿ ಪಂಡಿತ,ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಪ್ರಸ್ತುತ 2023-24 ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

ಕೃಷಿ ಪಂಡಿತ ಪ್ರಶಸ್ತಿ ಭಾಗವಹಿಸುವವರು ಸಮಗ್ರ ಕೃಷಿ ಪದ್ದತಿ, ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಬಳಕೆ, ನೀರಿನ ಸಮರ್ಥ ಸದ್ಬಳಕೆ,ಇನ್ನಿತರ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಸುಮ.ಹೆಚ್.ಎನ್.ತಿಳಿಸಿದ್ದಾರೆ. ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಂದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಕೃಷಿ,ಹಸಿರು ಮನೆ ಅಳವಡಿಕೆ,ಅರಣ್ಯ ಕೃಷಿ,ಕುರಿ,ಮೇಕೆ,ಮೊಲ ಸಾಕಾಣಿಕೆ,ಕೃಷಿ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.ಅರ್ಜಿಗಳನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು ದಿನಾಂಕ 24ನೇ ಜುಲೈ 2023 ರೊಳಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವುದು ಮತ್ತು ಈಗಾಗಲೆ ಪ್ರಶಸ್ತಿ ಪಡೆದ ರೈತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *