ವೃದ್ಧ ಕಾರ್ಮಿಕನ ಮೇಲೆ ಕಾಡಾನೆ ದಾಳಿ

ಸಮಗ್ರ ನ್ಯೂಸ್:‌ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವಯೋವೃದ್ಧ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಘಾಸಿಗೊಳಿಸಿರುವ ಘಟನೆ ಜು.14ರ ಸಂಜೆ ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯ ವೃಂದಾವನ ತೋಟದ ರಸ್ತೆಯಲ್ಲಿ ನಡೆದಿದೆ.

Ad Widget ... ..

ಭೂತನಕಾಡು ಟಾಟಾ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ರಾಮಸ್ವಾಮಿ ಎಂಬುವವರು ಸಂಜೆ ವೃಂದಾವನ ತೋಟದಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ದಿಢೀರನೇ ಕಾಡಾನೆ ಪ್ರತ್ಯಕ್ಷವಾಗಿದ್ದು ರಾಮಸ್ವಾಮಿ ಅವರ ಮೇಲೆ ಎರಗಿ ನೆಲಕ್ಕೆ ಬೀಳಿಸಿ ಕಾಲನ್ನು ತುಳಿಯಲಾರಂಭಿಸಿದೆ. ಅದೃಷ್ಟವಾಶಾತ್ ಅವರ ಹಿಂದೆ ಬರುತ್ತಿದ್ದ ತೋಟದ ರೈಟರ್ ಆನೆಯ ನ್ನು ಕಂಡು ಜೋರಾಗಿ ಬೊಬ್ಬಿಟ್ಟಿದ್ದಾರೆ. ಅವರ ಕಿರುಚಾಟಕ್ಕೆ ಕಾಡಾನೆ ರಾಮಸ್ವಾಮಿಯವರನ್ನು ಬಿಟ್ಟು ಅಲ್ಲಿಂದ ಕಾಲ್ಕಿತ್ತಿದೆ. ತೋಟದ ರೈಟರ್ ರವರಿಂದಾಗಿ ರಾಮಸ್ವಾಮಿರವರು ಸಾವಿನ ದವಡೆಯಿಂದ ಪಾರಾಗಿದ್ದು, ಕಾಲಿಗೆ ಗಂಭೀರವಾಗಿ ಗಾಯವಾಗಿರುವುದರಿಂದ ಮಡಿಕೇರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

Ad Widget

Leave a Comment

Your email address will not be published. Required fields are marked *