Ad Widget .

ಮಡಿಕೇರಿ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಅಪಘಾತ| ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಡಾ.ಮಂತರ್ ಗೌಡ

ಸಮಗ್ರ ನ್ಯೂಸ್:‌ ಮಡಿಕೇರಿ ವಿಧಾನಸಭಾ ಕ್ಷೇತ್ರದ “ಅರಗಲ್” ಗ್ರಾಮದಲ್ಲಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಅಪಘಾತಕ್ಕೆ ಒಳಗಾದ ಸುದ್ದಿ ತಿಳಿದ ತಕ್ಷಣ ಶಾಸಕ ಡಾ.ಮಂತರ್ ಗೌಡ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Ad Widget . Ad Widget .

ಅಧಿವೇಶನದಲ್ಲಿದ್ದ ಶಾಸಕ ಡಾ.ಮಂತರ್ ಗೌಡ ರವರು, ಅಧಿವೇಶನ ಮುಗಿದ ತಕ್ಷಣ ಗಾಯಗೊಂಡು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಬಳಿಕ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ವಿವರಗಳನ್ನು ಪಡೆದುಕೊಂಡರು ಹಾಗೂ ಉತ್ತಮವಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ವೈದ್ಯರಿಗೆ ಸೂಚನೆ ನೀಡಿ, ಮಕ್ಕಳ ಪೋಷಕರಿಗೆ ಧೈರ್ಯ ತುಂಬುವ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಪೋಷಕರು ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿ ಪಿ ಶಶಿಧರ್ ರವರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *