ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿದೆ.
ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿತರಿಂದ 9 ಕೆ.ಜಿ 500 ಗ್ರಾಂ ಗಾಂಜಾ ಮತ್ತು 6.2 ಗ್ರಾಂ ಎಂ.ಡಿ.ಎಂ.ಎ. ಮಾದಕವಸ್ತು, ನಗದು, ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್ ಪೋನ್, ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ಆರ್.ವಿ.ಗಂಗಾಧರಪ್ಪ, ಡಿವೈಎಸ್‌ಪಿ, ಸೋಮವಾರಪೇಟೆ ಉಪ ವಿಭಾಗ, ಮಹೇಶ್.ಬಿ.ಜಿ, ಸಿಪಿಐ, ಕುಶಾಲನಗರ ವೃತ್ತ ಹಾಗೂ ಮೋಹನ್‌ರಾಜು ಪಿ., ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಪತ್ತೆ ಮಾಡಿದ್ದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.
ಕಳೆದ ಎರಡು ದಿನಗಳಲ್ಲಿ 5 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದ್ದು ಒಟ್ಟು 17 ಆರೋಪಿಗಳನ್ನು ಬಂಧಿಸಿ 13.5 ಕೆ.ಜಿ ಗಾಂಜಾ, 19.5 ಗ್ರಾಂ MDMA ಮಾದಕ ವಸ್ತು, ನಗದು, ಕೃತ್ಯಕ್ಕೆ ಉಪಯೋಗಿಸಿದ 14 ಮೊಬೈಲ್ ಫೋನ್‌ಗಳು, 1 ಕಾರು, 2 ಆಟೋ ರಿಕ್ಷಾ, 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪ್ರಶಂಶಿಸಲಾಗಿದೆ.