ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಖಂಡಿಸುತ್ತದೆ.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್ ಹುಡಿ ಮಾಡಿ ಜೀವ ಬೆದರಿಕೆ ಒಡ್ಡಿರುವ ಘಟನೆಯನ್ನು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಜರುಗಿಸಬೇಕು ಎಂದು ಒತ್ತಾಯಿಸುತ್ತದೆ.
ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಜರಗಿಸದೇ ಇದ್ದಲ್ಲಿ ಎಲ್ಲಾ ಪತ್ರಕರ್ತರ ಸಂಘವನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ ಮತ್ತು ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ತಿಳಿಸಿದ್ದಾರೆ.