ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡದ ಉದ್ಘಾಟನೆ ಮತ್ತು ಜಲಜೀವನ್ ಮಿಷನ್ – ಹರ್ ಘರ್ ಜಲ್ ಘೋಷಣಾ ಕಾರ್ಯಕ್ರಮ ಸಮಾರಂಭ ಜು.15 ರಂದು ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಜಲಜೀವನ್ ಮಿಷನ್ – ಹರ್ ಘರ್ ಜಲ್ ನೀರಿನ ಟ್ಯಾಂಕನ್ನು ಮತ್ತು ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ. ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೂತನ ಕಟ್ಟಡ ಉದ್ಘಾಟಿಸಿದರು. ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಗ್ರಾಮ ಕು.ನೀ. ಮತ್ತು ನೈರ್ಮಲ್ಯ ಸುಳ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಸುಂದರಯ್ಯ, ಸಾಮಾಜಿಕ ಕಾರ್ಯಕರ್ತ ವಸಂತ ನಡುಬೈಲು, ಅತಿಥಿಗಳಾಗಿ ಭಾಗವಹಿಸಿದ್ದರು.
ಪಂಚಾಯತ್ ಉಪಾಧ್ಯಕ್ಷೆ ವನಿತಾ ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ಗ್ರಾ.ಪಂ. ಸದಸ್ಯರಾದ ಪುಷ್ಪಾವತಿ ಡಿ. ಕುಕ್ಕಟ್ಟೆ, ಮೋನಪ್ಪ ಅಲೇಕಿ, ಸುಂದರ ಗೌಡ ಶೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನ ಕಟ್ಟಡದ ಗುತ್ತಿಗೆದಾರ ಕರುಣಾಕರ ರೈ ಮರಿಕೆಯಿ, ಜಲಜೀವನ್ ಮಿಷನ್ ಗುತ್ತಿಗೆದಾರ ತೀರ್ಥರಾಮ ಕುಂಚಡ್ಕ ಮತ್ತು ಮುರುಳ್ಯ ವ್ಯಾಪ್ತಿಯ ನಿವೃತ್ತ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪೂವಮ್ಮರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರಾದ ಅಶ್ವಿನ್ ಜೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಸುಳ್ಯ ಉಪವಿಭಾಗದ ಸಹಾಯಕ ಅಭಿಯಂತರರಾದ ಮಣಿಕಂಠನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ಕು. ಜಾನಕಿ ಮುರುಳ್ಯ ಸ್ವಾಗತಿಸಿದರು. ಸದಸ್ಯ ಕರುಣಾಕರ ಹುದೇರಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಜಲಜೀವನ್ ಮಿಷನ್ – ಹರ್ ಘರ್ ಜಲ್ ನೀರಿನ ಟ್ಯಾಂಕನ್ನು ಮತ್ತು ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷೆ ವನಿತಾ ಸುವರ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ಗ್ರಾ.ಪಂ. ಸದಸ್ಯರಾದ ಪುಷ್ಪಾವತಿ ಡಿ. ಕುಕ್ಕಟ್ಟೆ, ಮೋನಪ್ಪ ಅಲೇಕಿ, ಸುಂದರ ಗೌಡ ಶೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಣ್ಮೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಾನಕಿ ಶಾಂತಿನಗರ ಸ್ವಾಗತಿಸಿ, ಮುರುಳ್ಯ ಗ್ರಾಮ ಪಂಚಾಯತ್ ಸದಸ್ಯೆ ಶೀಲಾವತಿ ಗೋಳ್ತಿಲ ವಂದಿಸಿದರು.