Ad Widget .

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ತಡೆಯಲು ಟಾಸ್ಕ್ ಪೋರ್ಸ್ ರಚನೆ

ಸಮಗ್ರ ನ್ಯೂಸ್:‌ ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

Ad Widget . Ad Widget .

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾಯಕ ನಾರಾಯಣಸ್ವಾಮಿ ಮೊಟ್ಟೆ ವಿಚಾರವನ್ನು ಪ್ರಸ್ತಾಪಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಆಗಿ ಬೆಳೆದಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಾರಾಯಣಸ್ವಾಮಿ ಆಗ್ರಹಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. ಇಲ್ಲಿ 39,50,179 ಮಕ್ಕಳು ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ ಎಂದರು.

Ad Widget . Ad Widget .

ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಿರುವವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು. ಅಲ್ಲದೆ, ಕಳಪೆ ಮೊಟ್ಟೆ ಪೂರೈಕೆಯನ್ನು ನಿಗ್ರಹಿಸಲು ವಿಶೇಷ ಟಾಸ್ಕ್‌ ಫೋರ್ಸ್‌ ನ್ನು ರಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Leave a Comment

Your email address will not be published. Required fields are marked *