ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದಂತ ಮಳೆ, ಮತ್ತೆ ಶುರುವಾಗಲಿದೆ. ಮುಂದಿನ ಎರಡು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಜುಲೈ.16ರಿಂದ ಜುಲೈ.19ರವರೆಗೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಜುಲೈ.18ರಿಂದ ಮುಂದಿನ ಎರಡು ದಿನ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನೂ ಜುಲೈ.19ರಂದು ಬೀದರ್ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದು, ಈ ಎರಡು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ಮೂರು ದಿನಗಳು ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ವಿಜಯಪುರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಕೋಲಾರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.


















