ಸಮಗ್ರ ನ್ಯೂಸ್: ಬಿಜೆಪಿಯನ್ನು ಕಟ್ಟಿಹಾಕಲು ಮಹಾಘಟಬಂಧನ್ ನಾಯಕರು ಬೆಂಗಳೂರಲ್ಲಿ ಇಂದಿನಿಂದ ಒಗ್ಗಟ್ಟು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದ್ರೆ, ದಳಪತಿ ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಲು ದೆಹಲಿಗೆ ತೆರಳುವ ಸಾಧ್ಯತೆ ದಟ್ಟವಾಗಿದೆ. ತೆನೆ ಹೊತ್ತ ಮಹಿಳೆ ಬಹುತೇಕ ಕಮಲ ಮುಡಿಯೋದು ಫಿಕ್ಸ್ ಆಗಿದ್ದು, ದೆಹಲಿಯಲ್ಲಿ ಅಂತಿಮ ಮುದ್ರೆ ಬೀಳುವ ಸಾಧ್ಯತೆ ದಟ್ಟವಾಗಿದೆ.
ಇಂದು ಅಥವಾ ನಾಳೆ ಹೆಚ್.ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, NDA ಸಭೆಗೂ ಮುನ್ನ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಪ್ರಧಾನಿ ಮೋದಿ ಜತೆಗೆ ಉತ್ತಮ ಬಾಂಧವ್ಯದ ಮಾತುಗಳನ್ನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಮಲ ಮುಡಿಯುವುದು ಫಿಕ್ಸ್ ಆಗಿದೆ.
ಬಿಜೆಪಿ ಕಟ್ಟಿಹಾಕಲು ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿವೆ. ಇದರ ಮಧ್ಯೆ ಬಿಜೆಪಿ ಸಹ ತನ್ನ ಬಲ ಹೆಚ್ಚಿಸಿಕೊಳ್ಳಲು ಜುಲೈ 18ರಂದು ಸಭೆ ನಡೆಸುತ್ತಿದೆ. ಎನ್‌ಡಿಎ ಮೈತ್ರಿಕೂಟವನ್ನ ಮತ್ತೆ ಬಲಪಡಿಸಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳೋ ಪ್ರಯತ್ನಕ್ಕೆ ಮುಂದಾಗಿದೆ. ಈ ಪೈಕಿ ಜೆಡಿಎಸ್‌ಗೂ ಗಾಳ ಹಾಕಿದೆ. ಹೆಚ್‌ಡಿ ಕುಮಾರಸ್ವಾಮಿ ಸಹ ಬಿಜೆಪಿ ಜೊತೆ ಮೈತ್ರಿಗೆ ಒಲವು ಹೊಂದಿದ್ದಾರೆ ಎನ್ನಲಾಗಿದ್ದು, ನಾಡಿದ್ದಿನ ಸಭೆ ಬಳಿಕ ಮೈತ್ರಿ ಬಹುತೇಕ ಫಿಕ್ಸ್ ಆಗಲಿದೆ ಎಂದು ಹೇಳಲಾಗಿದೆ.