Ad Widget .

ಭಕ್ತಾಧಿಗಳೇ ಗಮನಿಸಿ…| ಧಾರ್ಮಿಕ ದತ್ತಿ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಇನ್ಮುಂದೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವಂತಿಲ್ಲ. ಈ ಬಗ್ಗೆ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದ್ದು, ಇಲಾಖೆಯ ವ್ಯಾಪ್ತಿಯ ದೇವಾಲಯಗಳ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget . Ad Widget .

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ದೇವಸ್ಥಾನಗಳಿವೆ. ಈ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮಾಡಬೇಡಿ ಎಂದು ಈಗಾಗಲೇ ಫಲಕ ಹಾಕಲಾದರು ಜನರು ಮೊಬೈಲ್ ಬಳಕೆ ಮಾಡುತ್ತಿರುವ ಹಿನ್ನೆಲೆ ಇದೀಗ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ.

Ad Widget . Ad Widget .

ಈ ಹಿಂದೆ ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆಯನ್ನು ನಿಷೇಧಿಸಬೇಕು ಎಂಬುದಾಗಿ ದೇವಸ್ಥಾನದ ಅರ್ಚಕರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ದೇವಸ್ಥಾನಕ್ಕೆ ಬರುವ ಭಕ್ತರು ಆ ಪವಿತ್ರ ಸ್ಥಳದಲ್ಲಿ ಮೊಬೈಲ್ ಬಳಕೆ ಮಾಡುವುದರಿಂದ ಪೂಜೆಗಳಿಗೆ ತೊಂದರೆ ಆಗುತ್ತಿದ್ದು, ಅರ್ಚಕರು ಧ್ಯಾನ ಮಾಡುವಾಗ ಅಶ್ಲೀಲ ರಿಂಗ್‌ ಟೋನ್‌ಗಳು ಕೇಳಿ ಬರುತ್ತವೆ. ಕೆಲವರು ದೇವರ ಮೂರ್ತಿ, ಪೂಜೆಯ ಪೋಟೊ ತೆಗೆಯುತ್ತಾರೆ. ಇಂತಹ ಹಲವಾರು ಕಾರಣಗಳಿಂದ ದೇಗುಲದಲ್ಲಿ ಮೊಬೈಲ್ ಬಳಕೆ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ- ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

ಇದೀಗ ರಾಜ್ಯ ಸರ್ಕಾರ ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಿದೆ. ಹಾಗಾಗಿ ಇನ್ಮುಂದೆ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಸುವಂತಿಲ್ಲ.

Leave a Comment

Your email address will not be published. Required fields are marked *