Ad Widget .

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಸಮಗ್ರ ನ್ಯೂಸ್: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Ad Widget . Ad Widget .

ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.

Ad Widget . Ad Widget .

ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

ಉಮ್ಮನ್ ಚಾಂಡಿ 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಒಮನ್ ಚಾಂಡಿ 1970 ರಲ್ಲಿ ಪುತ್ತುಪಲ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.

Leave a Comment

Your email address will not be published. Required fields are marked *