ಮಂಗಳೂರು: ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬದಿಯ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.

. Ad Widget . Ad Widget

ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

. Ad Widget . . Ad Widget . Ad Widget

ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರುತ್ತಾ ಇರುತ್ತಾರೆ. ಇದೀಗ ಊರಿಗೆ ಬಂದು, ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡ್ರೈನೇಜ್ ಫಿಟ್ ನಲ್ಲಿ ಮಹಿಳೆ ಶವ ಮಡಚಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *