Ad Widget .

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆಗೊಳಿಸಿ ಮೆರವಣಿಗೆ ಬಳಿಕ ಗ್ಯಾಂಗ್ ರೇಪ್| ಆರೋಪಿ ಕಿಂಗ್ ಪಿನ್ ಅರೆಸ್ಟ್

ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ಹಳೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ಆತ ಹಸಿರು ಅಂಗಿ ಧರಿಸಿರುವ ವಿಡಿಯೋ ವೈರಲ್ ಆಗಿದ್ದು, ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು. ಇದೀಗ ವಿಡಿಯೋ ಹೊರಬಿದ್ದಿದೆ.

ಇದೀಗ ಈ ವಿಡಿಯೋವನ್ನು ತೆಗೆದುಹಾಕುವಂತೆ ಕೇಂದ್ರ ಸರಕಾರ ಗುರುವಾರ ಟ್ವಿಟರ್ ಸೇರದಂತೆ ಇತರ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ವರದಿಗಳ ಪ್ರಕಾರ, ಈ ಘಟನೆ ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ನಡೆದಿದೆ ಎನ್ನಲಾಗಿದ್ದು, ಇಬ್ಬರು ಮಹಿಳೆಯರನ್ನು ಸಮೀಪದ ಹೊಲಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಸ್ಥಳೀಯ ಬುಡಕಟ್ಟು ಸಂಘಟನೆ ಆರೋಪಿಸಿದೆ.

ಈ ವಿಡಿಯೋ ವ್ಯಾಟ್ಸ್‌ಆಯಪ್‌ಗಳಲ್ಲಿ ಹರಿದಾಡಲು ಆರಂಭಿಸಿದೆ. ಇದರಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭಗೊಂಡಿದೆ. ಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೇ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಇದೀಗ ಮತ್ತೊಂದು ಸುತ್ತಿನ ಹಿಂಸಾಚಾರಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *