ಬಣಕಲ್: ದೇವಸ್ಥಾನದ ಹುಂಡಿ ಕಳವು

ಸಮಗ್ರ ನ್ಯೂಸ್: ಕೊಟ್ಟಿಗೆಹಾರದ ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯನ್ನು ಹೊಡೆದು ಕಳ್ಳರು ಹಣವನ್ನು ದೋಚಿದ ಘಟನೆ ಬುಧವಾರ ನಡೆದಿದೆ.

Ad Widget ... ..

ಹಾಡು ಹಗಲಲ್ಲೇ ಬುಧವಾರ ಸಂಜೆ 4ಗಂಟೆಯ ಸಮಯದಲ್ಲಿ ದೇವಸ್ಥಾನಕ್ಕೆ ಹೋದಾಗ ರಾಡಿನಿಂದ ಹುಂಡಿಯ ಬೀಗ ಮುರಿದು ಹಣ ಕಳವು ಮಾಡಿರುವುದು ಗೊತ್ತಾಗಿದೆ. ಯಾರೋ ಅಪರಿಚಿತ ವ್ಯಕ್ತಿ ದೇವಸ್ಥಾನದಿಂದ ಹೋಗಿರುವುದನ್ನು ಸ್ಥಳೀಯರು ನೋಡಿರುವುದಾಗಿ ತಿಳಿಸಿದ್ದಾರೆ.ದೇವಸ್ಥಾನದ ಹಣವನ್ನು ಕಳವು ಮಾಡಿರುವ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *