ಬ್ಯಾಡ್ಮಿಂಟನ್ ಆಡುತ್ತಿದ್ದ ಲೋಕಾಯುಕ್ತ ಡಿವೈಎಸ್ಪಿ ಕುಸಿದು ಬಿದ್ದು ಸಾವು

ಸಮಗ್ರ ವಾರ್ತೆ: ಲೋಕಾಯುಕ್ತದಲ್ಲಿ ಡಿವೈಎಸ್‌ಪಿ ಆಗಿದ್ದ ಅಧಿಕಾರಿಯೊಬ್ಬರು ಬ್ಯಾಡ್ಮಿಂಟನ್‌ ಆಡುವಾಗ ಕುಸಿದುಬಿದ್ದು ಮೃತಪಟ್ಟ ಘಟನೆ ವಿಜಯಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.

Ad Widget ... ..

ಬುಧವಾರ ಸಂಜೆ ಲೋಕಾಯುಕ್ತ ಡಿವೈಎಸ್‌ಪಿ ಅರುಣ್‌ ನಾಯಕ್‌ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಈ ವೇಳೆ ಎದೆನೋವಿನಿಂದ ಕುಸಿದುಬಿದ್ದಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Ad Widget

ಅರುಣ್‌ ನಾಯಕ್‌ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದಾನೆ. ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ

Leave a Comment

Your email address will not be published. Required fields are marked *