Ad Widget .

ಸೌಜನ್ಯ ಕೊಲೆ ಪ್ರಕರಣ| ಮೌನ ಮುರಿದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಮೌನ ಮುರಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಈ ಬಗ್ಗೆ ಮಾತನಾಡಿದ್ದು, ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು, ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇ ನಾನು ಅಂತ ಹೇಳಿರುವ ವಿಡಿಯೋವೊಂದು ಈಗ ವೈರಲ್‌ ಆಗಿದೆ.

Ad Widget . Ad Widget .

ಶ್ರೀ ಕ್ಷೇತ್ರದ ನೌಕರರ ವಿಭಾಗದ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿರುವ ಅವರು ಸುಮಾರು ದಿನದಿಂದ ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ಕೇಳಿ ಬರುತ್ತಿರುವ ಆರೋಪಕ್ಕೆ ಕೊನೆಗೂ ಉತ್ತರ ನೀಡುವ ಪ್ರಯತ್ನವನ್ನು ಮಾಡಲು ಮುಂದಾಗಿದ್ದಾರೆ. ಇದೇ ವೇಳೆ ಅವರು ಯಾರಿಗೂ ಯಾವ ಕಾರಣಕ್ಕೂ ಅನ್ಯಾಯವನ್ನು ಮಾಡುವುದಿಲ್ಲ ಅಂತ ಹೇಳಿದರು.

Ad Widget . Ad Widget .

ಇನ್ನು ಕ್ಷೇತ್ರದ ಹೆಸರು ಯಾಕೆ ಎಳೆಯುತ್ತಾರೆ ಎನ್ನುವುದು ಗೊತ್ತಿಲ್ಲ. ಹೇಗಾದರೂ ಕ್ಷೇತ್ರವನ್ನು ಮಲೀನ ಮಾಡಬೇಕು ಎನ್ನುವುದೇ ಅವರ ಉದ್ದೇಶ. ಅನಾವಶ್ಯಕವಾಗಿ ಶತ್ರುತ್ವ ಬೆಳೆಸುತ್ತಿದ್ದಾರೆ. ಯಾಕೆ ಸುಮ್ಮನಿದ್ದೇನೆ ಅಂತ ಅವರು ಹೇಳಿದ್ದಾರೆ. ಇದೇ ವೇಳೆ ಅವರು ಒಳ್ಳೆ ಕೆಲಸ ಮಾಡಿದರೆ ನನ್ನನ್ನು ಯಾಕೆ ದ್ವೇಷಿಸುತ್ತೀರಿ. ಇದನ್ನೆಲ್ಲ ನಿಲ್ಲಿಸಲೇಬೇಕು ಎಂದರು.

ಸೌಜನ್ಯಾ ಪ್ರಕರಣವನ್ನು ಉಲ್ಲೇಖಿಸದೇ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಹಿಂದೆ ಏನೇನಾಗಿದೆ ಎಂಬುದು ನಿಮಗೆ ಗೊತ್ತು. ಕೆಲವರು ಆ ವಿಷಯವನ್ನು ಈಗ ತೆಗೆದುಕೊಂಡು ಮಾತಾಡುವ ವಿಚಾರಗಳಿಗೂ ನಮಗೂ ಸಂಬಂಧವೇ ಇಲ್ಲ. ಈ ಪ್ರಕರಣದ ತನಿಖೆಯನ್ನು ನಡೆಸುವಂತೆ ಗೃಹ ಇಲಾಖೆಗೆ ಮೊದಲು ಪತ್ರ ಬರೆದದ್ದೇ ನಾನು. ಈಗಲೂ ತನಿಖೆ ಇನ್ನಷ್ಟು ಮುಂದುವರಿಸಲಿ. ಆದರೆ, ಕ್ಷೇತ್ರದ ಹೆಸರನ್ನು ಏಕೆ ಸುಮ್ಮನೆ ಎಳೆಯುತ್ತಾರೋ ಗೊತ್ತಿಲ್ಲ. ಅವರಿಗೆ ಅಮಾಯಕ ಹುಡುಗಿಯ ಸಾವಿಗಿಂತ ಈ ಕ್ಷೇತ್ರವನ್ನು ಹೇಗಾದರೂ ಮಲಿನ ಮಾಡಬೇಕು ಎಂಬ ಉದ್ದೇಶವಿರುವುದು ಕಾಣುತ್ತದೆ’ ಎಂದರು.

‘ಇಂದು ಬೆಳಿಗ್ಗೆಯೂ ಆರು ಜನ ಬಂದು, ‘ನಿಮಗೇ ಹೀಗಾದರೆ ಹೇಗೆ ತಡೆದುಕೊಳ್ಳುವುದು’ ಎಂದು ಕಣ್ಣೀರು ಹಾಕಿ ಹೋದರು. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯ ಇಲ್ಲ. ಇದರಿಂದ ಅವರಿಗೆ ಸುಮ್ಮನೆ ಪ್ರಚಾರ. ನನ್ನ ಆತ್ಮ ಮತ್ತು ವ್ಯವಹಾರ ಶುದ್ಧವಾಗಿದೆ. ಯಾವುದಕ್ಕೂ ವಿಚಲಿತನಾಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರ್ಯಕ್ರಮಗಳನ್ನೂ ಧರ್ಮಸ್ಥಳದವರು ಚೆನ್ನಾಗಿ ಮಾಡುತ್ತಾರೆ ಎಂಬ ಹೆಸರು ಇದೆ. ಅದು ನಿಮ್ಮಿಂದಾಗಿ ಬಂದಿರುವುದು. 1.5 ಕೋಟಿ ಮಂದಿಗೆ ವಿಮೆ ಮಾಡಿಸಿದ್ದು, 87 ಲಕ್ಷ ಮಂದಿಗೆ ಆಯುಷ್ಮಾನ್‌ ಭಾರತ್‌ ಕಾರ್ಡ್‌ ಮಾಡಿಸಿದ್ದು ಧರ್ಮಸ್ಥಳ ಗ್ರಾಮಿಣಾಭಿವೃದ್ಧಿ ಯೋಜನೆಯವರು. ನೀವು ಮಾಡುವ ಸತ್ಕಾರ್ಯಗಳಿಗಾಗಿ ಕೆಲವರು ನನ್ನನ್ನು ದ್ವೇಷ ಮಾಡಿದರೆ ಹೇಗೆ’ ಎಂದು ಪ್ರಶ್ನಿಸಿದರು.

ನಾವು ಹೋಗುವ ದಾರಿಯನ್ನು ಬಿಟ್ಟು ಅಚೀಚೆ ನೋಡುವುದಿಲ್ಲ. ದಾರಿ ಮಧ್ಯೆ ಮೋಡ ಬಂದಿದೆ. ಅದನ್ನು ದೇವರೇ ತೆಗೆಯಬೇಕು. ಯಾವ ಅನ್ಯಾಯಕ್ಕೂ ಸಹಾಯ ಮಾಡುವವ ನಾನಲ್ಲ. ಅಪಪ್ರಚಾರ ಮಾಡುವವರಿಗೆ ಏನಾದರೂ ಮಾಡಲಿಕ್ಕೆ ಅಭಿಮಾನಿಗಳು ಸಿದ್ಧರಿದ್ದಾರೆ. ಅಭಿಮಾನಿಗಳಿಗೆ ನಾನು ಹೇಳುವುದಿಷ್ಟೇ-ನೀವೂ ಏನೂ ಮಾಡಬೇಡಿ. ನೈತಿಕ ಶಕ್ತಿಗಿಂತ ದೊಡ್ಡ ಶಕ್ತಿ ಯಾವುದೂ ಅಲ್ಲ’ ಎಂದರು.

Leave a Comment

Your email address will not be published. Required fields are marked *