Ad Widget .

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಉತ್ತಮ ಮಳೆಯಾಗಲಿದ್ದು ಕರಾವಳಿ ಭಾಗದಲ್ಲಿ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ. ಭಾರಿ ಅಲೆಗಳು ಏಳಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭಾರಿ ಮಳೆ ಹಾಘೂ ಬಿರುಗಾಳಿ ಇರುವ ಕಾರಣ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಅಪಾಯದ ಮಟ್ಟ ಹೆಚ್ಚಿದ್ದು ಸಮುದ್ರದ ತೀರಕ್ಕೆ ತೆರಳದಂತೆ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಸೂಚನೆ ನೀಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ದೊಡ್ಮನೆ ಬಳಿ ಕಳೆದ 24 ಗಂಟೆಯಲ್ಲಿ 163 ಮಿಮೀ ಮಳೆಯಾಗಿದೆ. ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸುಲಗೋಡು ಎನ್ನುವಲ್ಲಿ 163 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget . Ad Widget .

ಶಿವಮೊಗ್ಗ ಜಿಲ್ಲೆಯ ನಗರ, ತ್ರಿಣಿವೆ, ಹೊಸಹಳ್ಳಿ, ಕಂಡಿಕಾ, ಬಿದರಗೋಡು, ತೀರ್ಥಮತ್ತೂರು, ಹೊನ್ನೆತಾಲು, ಉತ್ತರ ಕನ್ನಡ ಜಿಲ್ಲೆಯ ದೊಡ್ಮನೆ, ರಾಮನಗರ, ಹಲಗೇರಿ, ಕದ್ರ, ಬೆಳಗಾವಿ ಜಿಲ್ಲೆಯ ಅಮಟೆ, ಮೊಹಿಸೆಟ್, ನೆರಸೆ, ಕಸಬ, ನಂದಗಡ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ, ರಾಯಚೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *