ಸುಳ್ಯದ ಐವರ್ನಾಡಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ತಲವಾರುನಲ್ಲಿ ಹಲ್ಲೆಗೆ ಯತ್ನ; ಪೊಲೀಸ್ ದೂರು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ತಲವಾರು ಹಿಡಿದು ಹಲ್ಲೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾಗಿ‌ ವರದಿಯಾಗಿದೆ.

Ad Widget ... ..

ಘಟನೆ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *