ಸಮಗ್ರ ನ್ಯೂಸ್: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಗುಂಪೊಂದು ವಿವಸ್ತ್ರಗೊಳಿಸಿಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಅವರ ಮನೆಯನ್ನು ಗುರುವಾರ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ದೃಶ್ಯಗಳಲ್ಲಿ ಪ್ರತಿಭಟನಾಕಾರರ ಗುಂಪು ಆರೋಪಿಯ ಮನೆಗೆ ಬೆಂಕಿ ಹಚ್ಚುವುದು ಕಂಡು ಬಂದಿದೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕಾದಾಡುತ್ತಿರುವ ಸಮುದಾಯವೊಂದರ ಮಹಿಳೆಯರನ್ನು ಇನ್ನೊಂದು ಕಡೆಯಿಂದ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ 4 ಮಂದಿ ಬಂಧಿಸಲಾಗಿದೆ.
ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಈ ಘಟನೆ ನಡೆದು ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಬ್ಬರು ಮಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ. ಆದರೆ ಬುಧವಾರವಷ್ಟೇ ಈ ಭಯಾನಕ ದೃಶ್ಯಾವಳಿಗಳು ಬಹಿರಂಗಗೊಂಡಿವೆ. ಈ ವಿಡಿಯೋ ವೈರಲ್ ಆದ ಕೂಡಲೇ ದೇಶಾದ್ಯಂತ ಆಕ್ರೋಶ ಹೆಚ್ಚಾಗಿದೆ.
ವಿಡಿಯೋವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡ ಮಣಿಪುರ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.