Ad Widget .

Moral policing| ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ| ಹಿಂದೂ ಯುವತಿಯರ ಜೊತೆ ಬೀಚ್ ಗೆ ತೆರಳಿದ್ದ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವತಿಯರ ಜತೆಗೆ ಬೀಚ್‌ಗೆ ತೆರಳಿದ ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದೆ.

Ad Widget . Ad Widget . Ad Widget . Ad Widget .

ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್‌ನ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತಂಡವೊಂದು ಇವರನ್ನು ಹಿಂಬಾಲಿಸಿ ಬಂದಿದ್ದು, ಹಲ್ಲೆ ನಡೆಸಿದೆ.

Ad Widget . Ad Widget .

ಬೀಚ್‌ಗೆ 6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿಹಾರಕ್ಕೆ ತೆರಳಿದ್ದರು. ತಂಡದಲ್ಲಿ 4 ಮಂದಿ ಹಿಂದೂ ವಿದ್ಯಾರ್ಥಿನಿಯರಿದ್ದು, ಇತರ ಇಬ್ಬರು ಮುಸ್ಲಿಂ ಯುವಕರಿದ್ದರು. ಈ ವೇಳೆ ತಂಡವೊಂದು ಇವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ತಡೆದು ನಿಲ್ಲಿಸಿ ಹಲ್ಲೆ ನಡೆಸಿದೆ. ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾಗಿದ್ದಾರೆ. ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ‌ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *