ಸಮಗ್ರ ನ್ಯೂಸ್: ರಾಜ್ಯದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಬೆಳಗಾವಿ, ಕಲಬುರಗಿ ಮತ್ತು ಬೀದರ ಜಿಲ್ಲೆ ಭಾರಿ ಮಳೆಯಾಗುತ್ತಿರುವುದರಿಂದ ಕೆಲ ಪ್ರದೇಶಗಳು ಜಲಾವೃತವಾಗಿವೆ. ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಬೀದರ, ಧಾರವಾಡ, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಉಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಗಾಳಿಯ ವೇಗವು ಘಂಟೆಗೆ 30-40 ಕಿಮೀ ಇರುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.