Ad Widget .

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ

ಸಮಗ್ರ ನ್ಯೂಸ್: ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ ಯಾಗಿದೆ.

Ad Widget . Ad Widget .


ರವಿವಾರ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಅವರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ ನಿಯಂತ್ರಿಸಲು ಆದೇಶಿಸಿದರು. ಪ್ರವಾಸಿಗರು ಮತ್ತು ಭಕ್ತಾದಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿ ಹರೀಶ್ ಹಾಗೂ ಪ್ರವಾಹ ರಕ್ಷಣಾ ತಂಡದ ಇತರ ಗೃಹ ರಕ್ಷಕರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *