ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ , ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸೋಮವಾರ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಗೆ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದೆ. ಮೇಘಸ್ಪೋಟದ ಕಾರಣ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮುಂಜಾಗ್ರತೆಯಿಂದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.