ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

. Ad Widget . Ad Widget

ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇತರೆಡೆಗಳಲ್ಲೂ ವ್ಯಾಪಿಸಿದೆ. ಆದರೆ, ಕರಾವಳಿಯಲ್ಲಿ ಮಳೆ ಪ್ರಮಾಣ ಸಾಮಾನ್ಯವಾಗಿದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

. Ad Widget . . Ad Widget . Ad Widget

ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯ ಕೆಲವೆಡೆ ಜು.23 ಮತ್ತು 24ರಂದು ಜೋರು ಮಳೆಯಾಗಲಿದೆ.

ಉತ್ತರ ಒಳನಾಡಿನ ಕೆಲವೆಡೆ ಶನಿವಾರ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಿರುಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ಮತ್ತು ಕರಾವಳಿಯಲ್ಲಿ 30-40 ಕಿ.ಮೀ ನಷ್ಟಿತ್ತು ಎಂದು ಹವಾಮಾನ ಮೂಲಗಗಳಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *