ಸಮಗ್ರ ವಾರ್ತೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ 204.4 ಮಿ.ಮೀ. ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.