Ad Widget .

ಭಾರೀ ಮಳೆ ಹಿನ್ನಲೆ| ನಾಳೆ(ಜು.25) ನಡೆಯಬೇಕಿದ್ದ ಮಂಗಳೂರು ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಕೊಡಗು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ನಾಳೆ(ಜು.25) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Ad Widget . Ad Widget .

ಈ ಕುರಿತು ವಿ.ವಿ ಪರೀಕ್ಷಾಂಗ ಪ್ರಕಟಣೆ ಹೊರಡಿಸಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು.

Ad Widget . Ad Widget .

ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಈ ಮೂಲಕ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *