ಸಮಗ್ರ ನ್ಯೂಸ್: ಮಡಿಕೇರಿ -ಮಂಗಳೂರು ಹೆದ್ದಾರಿ ಮದೆ ಸಮೀಪದ ಕರತೋಜಿ ಬಳಿ ಹೆಚ್ಚಿನ ಮಳೆಯಿಂದಾಗಿ ಭೂ ಕುಸಿತದಿಂದ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಬಂದ್ ಆಗಿದ್ದ ರಸ್ತೆಯನ್ನು ರಾತ್ರಿಯೇ ತೆರವುಗೊಳಿಸಿ ಸುಗಮ ಅನುವು ಮಾಡಿ ಕೊಡಲಾಯಿತು.

ಈ ಸಂಧರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ತಹಶಿಲ್ದಾರರಾದ ಕಿರಣ್ ಗೌರಯ್ಯ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರು, ಅರಣ್ಯ ಇಲಾಖೆಯ ಸಿಬ್ಬಂದಿಯವರು, ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.