ಕಬಕ: ಕಾರು-ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ| ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಜು.25 ರಂದು ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

Ad Widget ... ..

ಮುಂಬೈ ಮೂಲದ ಪ್ರಯಾಣಿಕರು, ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.

Ad Widget

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.

Leave a Comment

Your email address will not be published. Required fields are marked *