Ad Widget .

ಉಡುಪಿ: ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಲಾಗಿತ್ತಾ? ಎಸ್ಪಿ ಅಕ್ಷಯ್ ಹಾಕೆ ಹೇಳಿದ್ದೇನು?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.

Ad Widget . Ad Widget . Ad Widget .

ಎಸ್ ಪಿ ಹೇಳಿದ್ದೇನು?: ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

ಘಟನೆ ಸಂಬಂಧಪಟ್ಟಂತೆ ಒಂದಷ್ಟು ಮಾಹಿತಿಗಳು ಹರಿದಾಡುತ್ತಿದೆ. ಆದರೆ ಪೊಲೀಸ್ ಇಲಾಖೆಗೆ ಘಟನೆಯ ವಿಡಿಯೋ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೂ ನಾವು ನಿಗಾ ಇಟ್ಟಿದ್ದು, ಅಲ್ಲೂ ನಮ್ಮ ಕಣ್ಣಿಗೆ ಬಿದ್ದಿಲ್ಲ. ಯಾರಾದರೂ ಸಿಕ್ಕಿದರೆ ನಮಗೆ ಮಾಹಿತಿ ತಿಳಿಸಿ ಎಂದಿದ್ದಾರೆ.

ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಮಾಡಿದವರು ಟ್ವೀಟ್ ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.

ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡ ಎಂದು ಎಸ್ ಪಿ ಮನವಿ ಮಾಡಿದರು.

Leave a Comment

Your email address will not be published. Required fields are marked *