ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಭಾರಿ ಮಳೆಯ ಎಚ್ಚರಿಕೆ ನಡುವೆಯೂ ಪ್ರತ್ಯೇಕವಾಗಿ ಎರಡು ಜಿಲ್ಲೆಗಳಲ್ಲಿ ಭಯಂಕರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನ ಕೆಲವು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಭರ್ಜರಿ ಮಳೆಯಾಗಲಿದೆ. ರಾಯಚೂರು, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಸೇರಿ ದಕ್ಷಿಣ ಒಳನಾಡಿನ ಬಳ್ಳಾರಿ, ಹಾಸನ, ಚಿತ್ರದುರ್ಗ ಜಿಲ್ಲೆಯಲ್ಲೂ ಅಬ್ಬರದ ಮಳೆ ಸುರಿಯಲಿದೆ.
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.