Ad Widget .

ರಾಜ್ಯಾದ್ಯಂತ ಭಾರೀ ಮಳೆ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ| ಇನ್ನೆರಡು ದಿನವೂ ಮುಸಲಧಾರೆ

ಸಮಗ್ರ ನ್ಯೂಸ್: ಕಳೆದ ಎರಡು ವಾರದಿಂದ ರಾಜ್ಯದ ಹಲೆವೆಡೆ ಸತತವಾಗಿ ಮಳೆ ಆಗುತ್ತಿರುವುದುರಿಂದ ಜೀವನದಿಗಳಾದ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.

Ad Widget . Ad Widget .

ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನು ಕೆಲವು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

Ad Widget . Ad Widget .

ಪ್ರವಾಹ ಭೀತಿ ಇರುವ ಜಿಲ್ಲೆಗಳಲ್ಲಿ ಶಾಲಾ – ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಜುಲೈ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆ ರಸ್ತೆಗಳು ಜಲಾವೃತಗೊಂಡಿದ್ದು, ಸೇತುವೆಗಳು ಮುಳುಗಡೆ ಆಗಿವೆ.

ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಮಳೆ ಕಾರಣ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ.

ಘಟಪ್ರಭಾ ನದಿ ಅಪಾಯಮಟ್ಟದಲ್ಲಿ ಹರೀತಿದೆ. ಹಿಡಕಲ್ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದೆ. ಹುಕ್ಕೇರಿಯ ಹುನ್ನೂರು ಗ್ರಾಮದ ಹಿಡಕಲ್ ಡ್ಯಾಮ್ ನೀರಿನಲ್ಲಿದ್ದ ವಿಠಲ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆ ಆಗಿದೆ. ಸೇತುವೆ ಮೇಲೆ 2 ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದ ಕಳಸ-ಹೊರನಾಡು ಸಂಪರ್ಕ ಬಂದ್ ಆಗಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ಮೂಕನಮನೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.. ಜಲಪಾತ ವೀಕ್ಷಣೆಗೆ ಬಂದು ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರನ್ನ ರಕ್ಷಣೆ ಮಾಡಲಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿಯಲ್ಲಿ ಕಾವೇರಿ ನದಿಯ ಪ್ರತಾಪಕ್ಕೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರುಸೇತುವೆ ಮುಳುಗಡೆಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಸ್ನಾನಘಟ್ಟ 2ನೇ ಬಾರಿಗೆ ಮುಳುಗಡೆಯಾಗಿದೆ.

ಬೆಂಗಳೂರಿನ ಹವಾಮಾನ ಕೇಂದ್ರವು ಕರಾವಳಿಗೆ ನಾಳೆ ಮುಂಜಾನೆಯವರೆಗೆ ರೆಡ್‌ಅಲರ್ಟ್, 27ರ ಮುಂಜಾನೆಯವರೆಗೆ ಆರೆಂಜ್ ಅಲರ್ಟ್ ಹಾಗೂ ಜು.28 ಮತ್ತು 29ರಂದು ಎಲ್ಲೋ ಅಲರ್ಟ್‌ನ್ನು ಘೋಷಿಸಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 45ಕಿ.ಮೀ. ವೇಗದ ಗಾಳಿಯು ಸಮುದ್ರ ತೀರದುದ್ದಕ್ಕೂ ಬೀಸಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

Leave a Comment

Your email address will not be published. Required fields are marked *