ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಗಳ ನಡುವೆ ವಿಡಿಯೋ ಕಾನ್ಫರೆನ್ಸ್| ಕಾರಣ!?

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಿವರವಾದ ವರದಿ ಕೋರಿದ್ದಾರೆ.

Ad Widget ... ..

ಮಂಗಳವಾರ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಕಡೆಗಳಲ್ಲಿ ವಸತಿ ಪ್ರದೇಶಗಳು ಜಲಾವೃತವಾಗಿವೆ.

Ad Widget

ಈ ಹಿನ್ನೆಲೆಯಲ್ಲಿ ಸಿಎಮ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದು, ವರದಿ ಸಂಗ್ರಹಿಸಲಿದ್ದಾರೆ.

Leave a Comment

Your email address will not be published. Required fields are marked *