ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.

Ad Widget ... ..

ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Ad Widget

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Leave a Comment

Your email address will not be published. Required fields are marked *