Ad Widget .

ಆಗುಂಬೆ ಘಾಟ್ ರಸ್ತೆಯಲ್ಲಿ ಬಿರುಕು| ಘನ‌ ವಾಹನ ಸಂಚಾರ ನಿಷೇಧಿಸಿ ಉಡುಪಿ ‌ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಲ್ಪೆಯಿಂದ ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಗೂ ಅದಕ್ಕೆ ಬದಲಿ ಮಾರ್ಗವನ್ನು ಸೂಚಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಡುಪಿ-ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯ 6,7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯು ಕುಸಿದಿರುವುದು ಕಂಡುಬಂದಿದೆ.

Ad Widget . Ad Widget . Ad Widget .

ಹೀಗಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ಸೂಕ್ತವಲ್ಲ ಮತ್ತು ಇದರಿಂದ ರಸ್ತೆ ಮತ್ತಷ್ಟು ಕುಸಿದು ಅಪಘಾತದ ಸಂಭವ ಇರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಜು.27ರಿಂದ ಸೆಪ್ಟಂಬರ್ 15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಇಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

ಇದರೊಂದಿಗೆ ಭಾರೀ ವಾಹನಗಳಿಗೆ ಜು.27ರಿಂದ ಸೆ.15ರವರೆಗೆ ಬದಲಿ ಪರ್ಯಾಯ ಮಾರ್ಗಗಳನ್ನು ಸಹ ಸೂಚಿಸಲಾಗಿದೆ. ಈ ಅವಧಿಯಲ್ಲಿ ಈ ವಾಹನಳು ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಾಘಾಟ್- ಕಾರ್ಕಳ- ಉಡುಪಿ ಹಾಗೂ ತೀರ್ಥಹಳ್ಳಿ-ಮಾಸ್ತಿಕಟ್ಟೆ- ಸಿದ್ಧಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *