Ad Widget .

ಕನಕಪುರ ರಸ್ತೆ ಬದಿ ಕಂತೆ ಕಂತೆ 2000ದ ನೋಟು

ಸಮಗ್ರ ನ್ಯೂಸ್: ದೇಶದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ವತಿಯಿಂದ 2,000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಬ್ಯಾಂಕ್‌ಗಳಿಂದ ಯಾವುದೇ ಗ್ರಾಹಕರಿಗೆ ಈ ನೋಟುಗಳನ್ನು ನೀಡುವುದಿಲ್ಲ. ಜೊತೆಗೆ, ಯಾವುದೇ ಬ್ಯಾಂಕ್‌ಗಳ ಎಟಿಎಂನಲ್ಲಿಯೂ 2000 ರೂ. ಮುಖಬೆಲೆಯ ನೋಟುಗಳನ್ನು ಹಾಕುತ್ತಿಲ್ಲ. ಆದರೆ, ಗ್ರಾಹಕರಿಂದ ಈ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಪಡೆಯಲಾಗುತ್ತದೆ. ಗ್ರಾಹಕರು ಈ ನೋಟುಗಳನ್ನು ತಂದು ಬ್ಯಾಂಕ್‌ ಖಾತೆಗೆ ಜಮಾ ಮಾಡಬಹುದು ಎಂದು ತಿಳಿಸಿದೆ. ಆದರೆ, ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದ ತೆರಿಗೆ ವಂಚಿತ (ಕಪ್ಪುಹಣ) ಹಣವಿದ್ದರೆ ಅದನ್ನು ಬ್ಯಾಂಕ್‌ಗೆ ಡೆಪಾಸಿಟ್‌ ಮಾಡುವ ಮುನ್ನವೇ ಸೂಕ್ತ ದಾಖಲೆಗಳನ್ನು ಕೊಡಬೇಕಾಗುತ್ತದೆ. ಆದರೆ, ಹೆಚ್ಚಿನ ನೋಟುಗಳಿದ್ದವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

Ad Widget . Ad Widget .

ಕನಕಪುರ ರಸ್ತೆಯಲ್ಲಿ ಎಸೆಯಲಾಗಿರುವ 2000 ರೂ. ಮುಖಬೆಲೆಯ ಎರಡು ಬಾಕ್ಸ್‌ ಹಾಗೂ ಒಂದು ಸೂಟ್‌ಕೇಸ್‌ನ ಕಂತೆ ಕಂತೆ ನೋಟುಗಳು ನಕಲಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಬೀಸಾಡಿರುವ ಎಲ್ಲ ಎರಡು ಸಾವಿರ ಮುಖಬೆಲೆಯ ನೋಟುಗಳು ಕಲರ್‌ ಜೆರಾಕ್ಸ್ ಮಾಡಿದ ನೋಟುಗಳಾಗುವೆ. ನಕಲಿ ನೋಟುಗಳನ್ನು ಮುದ್ರಣ ಮಾಡಿ ಚಲಾವಣೆಗೆ ತರಲು ದುಷ್ಕರ್ಮಿಗಳು ಹುನ್ನಾರ ನಡೆಸಿದ್ದರು ಎಂಬಂತೆ ಕಂಡುಬರುತ್ತಿದೆ.

Ad Widget . Ad Widget .

ಆದರೆ, ಭಾರತೀಯ ರಿಸರ್ವ್‌ ಬ್ಯಾಂಕ್‌ ವತಿಯಿಂದ ಎರಡು ಸಾವಿರ ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರ ಬೆನ್ನಲ್ಲೇ ನೋಟುಗಳನ್ನು ಎಸೆಯಲಾಗಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ರಸ್ತೆಯ ಬಳಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ನೋಡಿದ ಸಾರ್ವಜನಿಕರು ಸಂಚಾರಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಸಂಚಾರಿ ಪೊಲೀಸರು ಸ್ಥಳೀಯ ತಲಘಟ್ಟಪುರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ ಪೊಲೀಸರು ಇವು ಕಲರ್‌ ಜೆರಾಕ್ಸ್ ಮಾಡಿದ ನಕಲಿ ನೋಟುಗಳು ಎಂಬುದನ್ನು ಗುರುತಿಸಿದ್ದಾರೆ. ನಂತರ, ಎಸೆದು ಹೋದ ನಕಲಿ ನೋಟುಗಳ ಬಂಡಲ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅಲ್ಲಿಗೆ ಜೆರಾಕ್ಸ್ ನೋಟುಗಳು ಅಲ್ಲಿಗೆ ಹೇಗೆ ಬಂದವು ಎಂಬುದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Leave a Comment

Your email address will not be published. Required fields are marked *