Ad Widget .

ಬಿಜೆಪಿ ಆಡಳಿತವಿರುವ ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ? ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಿಜೆಪಿಯೇತರ ರಾಜ್ಯ ಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾಗಾಲ್ಯಾಂಡ್‌ನ‌ಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾಲ್ಯಾಂಡ್‌ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ ನ್ಯಾಯಾಲಯದ ಆದೇಶ ಪಾಲನೆಯಾಗದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.

Ad Widget . Ad Widget . Ad Widget .

ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರ ನ್ಯಾಯಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ವೇಳೆ ಆದೇಶ ಪಾಲನೆಯಾಗದ್ದನ್ನು ಗಮನಿಸಿ, ಬಿಜೆಪಿಯೇತರ ರಾಜ್ಯಗಳ ಎಡವಟ್ಟಿಗೆ ತೀಕ್ಷ್ಣ ಕ್ರಮ ಕೈಗೊಳ್ಳುವ ನೀವು, ನಿಮ್ಮದೇ ಪಕ್ಷ ಆಡಳಿತದಲ್ಲಿರುವ ರಾಜ್ಯಗಳ ವಿಚಾರದಲ್ಲಿ ಏಕೆ ಸುಮ್ಮನಿರುತ್ತೀರಿ ಎಂದು ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಇದೇ ವೇಳೆ ಸಾಂವಿಧಾನಿಕ ನಿಬಂಧನೆಯ ಉಲ್ಲಂಘನೆ ಸಲ್ಲದು ಎಂದು ಎಚ್ಚರಿಸಿದ್ದಾರೆ.

Leave a Comment

Your email address will not be published. Required fields are marked *