ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು.

ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿ ಹೂವಪ್ಪರು ಓರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು ತಿಳಿಸಿದ್ದಾರೆ. ಅವರ ಸಾವಿನಿಂದ ಗ್ರಹ ರಕ್ಷಕ ಇಲಾಖೆ ಗೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದಿಸಿದ್ದಾರೆ.